DIPR Bengaluru Rural

DIPR Bengaluru Rural

Share

06/11/2024

"ಇ-ಶ್ರಮ್ ಯೋಜನೆಯ ಜಾಗೃತಿಗಾಗಿ ಪ್ರಚಾರ ವಾಹನಕ್ಕೆ ಚಾಲನೆ"
------------------------------------------------------------------------------

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವ್ಹೆಂಬರ್. 06, (ಕರ್ನಾಟಕ ವಾರ್ತೆ): 23 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್‌ ಕಾರ್ಡ್ ನೀಡಿ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವ ಬಗ್ಗೆ ಹಾಗೂ ಇ-ಶ್ರಮ್ ಯೋಜನೆಯ ಕುರಿತು ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಭೋಲಾ ಪಂಡಿತ್ ಅವರು ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ "ಪ್ಯಾನ್-ಇಂಡಿಯಾ ರೆಸ್ಕ್ಯೂ ಆಂಡ್ ರಿಯಾಬಿಲೇಷನ್ ಕ್ಯಾಂಪೇನ್ ಪ್ರೊಗ್ರಾಮ್ - ಎ ಸ್ಟೆಪ್ ಟು ಎರ್ರ್ಯಾಡಿಕೇಟ್ ಚೈಲ್ಡ್ ಲೇಬರ್‌" ಮತ್ತು ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 23 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್‌ ಕಾರ್ಡ್ ನೀಡಿ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವ ಬಗ್ಗೆ ಹಾಗೂ ಇ-ಶ್ರಮ್ ಯೋಜನೆಯ ಕುರಿತು ಜಿಲ್ಲೆಯಾದ್ಯಂತ ಪ್ರಚಾರ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುವುದು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಹರ್ಷವರ್ಧನ್ ಎಸ್.ಎಲ್, ಇತರೆ ಅಧಿಕಾರಿಗಳು ಹಾಜರಿದ್ದರು.

06/11/2024

"ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ, ಹೆಚ್ಚುವರಿ ಹಣ ಪಡೆದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ"
------------------------------------------------------------------------------

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವ್ಹೆಂಬರ್ 06, 2024(ಕರ್ನಾಟಕ ವಾರ್ತೆ): ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 69,230 ಹೆಕ್ಟೇರ್ ಪ್ರದೇಶದಲ್ಲಿ ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ತೆನೆ ತುಂಬುವ ಹಾಗೂ ಕಟಾವು ಹಂತದಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ ಕಟಾವು ಕೈಗೊಳ್ಳುತ್ತಿದ್ದು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ 3500 ರೂಗಳಿಂದ 4000 ರೂಗಳ ವರೆಗೆ ಬಾಡಿಗೆ ಹಣ ಪಡೆಯುತ್ತಿರುವ ಬಗ್ಗೆ ಜಿಲ್ಲೆಯ ರೈತರುಗಳಿಂದ ದೂರು ಬಂದಿರುತ್ತದೆ.
ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಪ್ರಸ್ತುತ ಇಂಧನ ವೆಚ್ಚ ಹಾಗೂ ಕಾರ್ಮಿಕರ ಕೂಲಿ ವೆಚ್ಚ ಹೆಚ್ಚಾಗಿದ್ದು, ಇತರೇ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಯಂತ್ರಕ್ಕೆ ಕಳೆದ ವರ್ಷ ನಿರ್ಧರಿಸಿದಂತೆ, ಪ್ರತಿ ಗಂಟೆಗೆ ನ್ಯೂ ಹಾಲೆಂಡ್/ ಜಾನ್ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ಗಂಟೆಗೆ 3350 ರೂಗಳು ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ ಗಂಟೆಗೆ 2700 ರೂಗಳು ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿದೆ. ತಪ್ಪಿದ್ದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

06/11/2024

"ಅನಧಿಕೃತ ಲಾಟರಿ-ಮಟ್ಕಾ ಮಾರಾಟ ನಿಷೇಧ"

"ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ದೂರು ನೀಡಿ:- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್"

ಬೆಂ.ಗ್ರಾ.ಜಿಲ್ಲೆ, ನ.06(ಕರ್ನಾಟಕ ವಾರ್ತೆ):- ರಾಜ್ಯಾದ್ಯಂತ ಅನಧಿಕೃತ ಲಾಟರಿ-ಮಟ್ಕಾ ಮಾರಾಟ ಈಗಾಗಲೇ ನಿಷೇಧಿಸಲಾಗಿದ್ದು ಜಿಲ್ಲೆಯಲ್ಲಿ ಎಲ್ಲಿಯಾದರೂ ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ಕೂಡಲೇ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ನಡೆದ ಅನಧಿಕೃತ ಲಾಟರಿ/ ಮಟ್ಕಾ ಹಾವಳಿಯ ನಿಯಂತ್ರಣದ ಬಗ್ಗೆ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರವು ಅನಧಿಕೃತವಾಗಿ ನಡೆಸುವ ಲಾಟರಿ ಹಾಗೂ ಮಟ್ಕಾ ದಂಧೆಯನ್ನು ಸಂಪೂರ್ಣವಾಗಿ ರಾಜ್ಯದಾದ್ಯಂತ ನಿಷೇಧಿಸಿದೆ. ಅನಧಿಕೃತವಾಗಿ ಲಾಟರಿ- ಮಟ್ಕಾ ದಂಧೆಯನ್ನು ನಡೆಸುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. 2024 ನೇ ಸಾಲಿನಲ್ಲಿ ದೊಡ್ಡಬಳ್ಳಾಪುರದಲ್ಲಿ ಮಟ್ಕಾ ಹಾವಳಿಯ ಒಂದು ಪ್ರಕರಣ ಕಂಡುಬಂದಿತ್ತು. ಅಕ್ರಮವಾಗಿ ಮಟ್ಕಾ ಜೂಜಾಟಕ್ಕೆ ಸಾರ್ವಜನಿಕರಿಂದ ಹಣವನ್ನು ಕಟ್ಟಿಸಿಕೊಂಡು ಜೂಜಾಟ ನಡೆಸುತ್ತಿದ್ದರು. ಅವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹೇಳಿದರು.
ಸಾರ್ವಜನಿಕರಿಗೆ ಲಾಟರಿ- ಮಟ್ಕಾ ಹಾವಳಿ ಬಗ್ಗೆ ಅರಿವು ಮೂಡಿಸಿ, ಹಿಂದಿನ ಪ್ರಕರಣಗಳು ಕಂಡು ಬಂದ ಪ್ರದೇಶಗಳಲ್ಲಿ ಆಗಿಂದಾಗ್ಗೆ ಗಸ್ತು ಹೋಗಬೇಕು. ಕಾಲಕಾಲಕ್ಕೆ ಸಭೆ ನಡೆಸಿ ಲಾಟರಿ ಮಟ್ಕಾ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ ಎಂದು ಪೋಲಿಸ್ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೋಲಿಸ್ ಅಧೀಕ್ಷಕರಾದ ನಾಗೇಶ್, ಪಿಂಚಣಿ , ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ವೇತ ಪ್ರಿಯದರ್ಶಿನಿ ಹಾಗು ಮುರಳಿ ಮೋಹನ್ ಉಪಸ್ಥಿತರಿದ್ದರು.

Want your public figure to be the top-listed Public Figure in Bangalore?
Click here to claim your Sponsored Listing.

Telephone

Website

Address


No 17, Vartha Soudha, Bhagawan Mahaveer Road (Infantry Road)
Bangalore
560001