Pralhad Joshi
Member of Parliament, Dharwad
20/06/2026
ಇಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಜರುಗಿದ ಪಿಎಂ ಕಿಸಾನ್ ಸಮ್ಮಾನ್ ನಿಧಿ (ಪಿಎಂ- ಕಿಸಾನ್) ಯೋಜನೆಯ 23ನೇ ಕಂತಿನ ಹಣ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ Narendra Modi ಯವರು ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ 'ಪಿಎಂ ಕಿಸಾನ್ ಉತ್ಸವ ದಿವಸ್' ಆಚರಿಸುತ್ತಿರುವ ಹಿನ್ನಲೆಯಲ್ಲಿ 23ನೇ ಕಂತಿನ ಆರ್ಥಿಕ ನೆರವು ನೇರ ನಗದು ವರ್ಗಾವಣೆ (DBT) ಮೂಲಕ ಬಿಡುಗಡೆಗೆ ಚಾಲನೆ ನೀಡಿದ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶಾದ್ಯಂತ 9 ಕೋಟಿ 44 ಲಕ್ಷಕ್ಕಿಂತಲೂ ಹೆಚ್ಚಿನ ರೈತ ಫಲಾನುಭವಿಗಳಿಗೆ 23ನೇ ಕಂತಿನ ಆರ್ಥಿಕ ನೆರವು ₹18,880 ಕೋಟಿ ಮೊತ್ತವನ್ನು ಏಕಕಾಲಕ್ಕೆ ಡಿಬಿಟಿ ಮೂಲಕ ಇಂದು ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ರಾಜ್ಯದ ಒಟ್ಟು 41,54,160 ಫಲಾನುಭವಿ ರೈತರಿಗೆ ಕೇಂದ್ರ ಸರ್ಕಾರದಿಂದ ಒಟ್ಟಾರೆ ರೂ. 830.832 ಕೋಟಿ ರೂ ಹಾಗೂ ನಮ್ಮ ಧಾರವಾಡ ಜಿಲ್ಲೆಯ 99,771 ರೈತರಿಗೆ ₹19.55 ಕೋಟಿ ಮೊತ್ತದ ಹಣ ವರ್ಗಾವಣೆಯಾಗಿದ್ದು, ರೈತರ ಜೀವನಮಟ್ಟ ಸುಧಾರಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ಬಲ ತುಂಬುವಲ್ಲಿ ಸಹಕಾರಿಯಾಗಿದೆ.
ವಿಕಸಿತ ಭಾರತ ನಿರ್ಮಾಣದ ಸಂಕಲ್ಪದ ಗುರಿ ಸಾಧಿಸಿ ಅನ್ನದಾತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವನಮ್ಮ ಅನ್ನದಾತರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸರ್ಕಾರ ಸದಾ ಬದ್ಧವಾಗಿದೆ. ದೇಶದ ಇತಿಹಾಸದಲ್ಲೇ ಹಿಂದೆಂದೂ ಕಾಣದ ರೀತಿಯಲ್ಲಿ ಕೃಷಿ ವಲಯದ ಸಮಗ್ರ ಪ್ರಗತಿಗಾಗಿ ತಂತ್ರಜ್ಞಾನ ಮತ್ತು ನೇರ ನಗದು ವರ್ಗಾವಣೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುತ್ತಿದೆ. ಪಿಎಂ-ಕಿಸಾನ್ ಯೋಜನೆಯು ನಮ್ಮ ದೇಶದ ರೈತರ ಬೆನ್ನೆಲುಬಾಗಿದೆ.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎಂ ಆರ್ ಪಾಟೀಲ M R Patil , ಮಹಾಪೌರರಾದ ಶ್ರೀಮತಿ ಜ್ಯೋತಿ ಪಾಟೀಲ, ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪಿ.ಯು. ಕೃಷ್ಣರಾಜ್ ಹಾಗೂ ಕೃಷಿ ವಿಶ್ವವಿದ್ಯಾಲಯ ಧಾರವಾಡದ ಆಡಳಿತ ಮಂಡಳಿ ಸದಸ್ಯರುಗಳು, ಅಧಿಕಾರಿ ವರ್ಗ ಸೇರಿದಂತೆ ಗಣ್ಯರು ಹಾಗೂ ರೈತ ಬಾಂಧವರು ಉಪಸ್ಥಿತರಿದ್ದರು.
Click here to claim your Sponsored Listing.
Category
Contact the public figure
Website
Address
Chittaguppi Hospital Compound, Near HDMC
Hubli
580020